ಭಾರತದ ಅಭಿವೃದ್ದಿಯ ಪಥದಲ್ಲಿ ಇರಲಿದೆ ಬಾಲಿವುಡ್​ ಪಾತ್ರ: ಗಾಯಕ ಕೈಲಾಶ್​ ಖೇರ್​

ಹೊಸದಿಗಂತ ಡಿಜಿಟಲ್ ಡೆಸ್ಕ್:

2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವುದರಲ್ಲಿ ಬಾಲಿವುಡ್​ ಪಾತ್ರ ವಹಿಸುತ್ತದೆ ಎಂದು ಗಾಯಕ ಕೈಲಾಶ್​ ಖೇರ್​ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ಮೋದಿ ಕರೆ ಕೊಟ್ಟಿರುವ ಅಮೃತಕಾಲ ಯೋಜನೆ ಕುರಿತು ಮಾತನಾಡಿದ ಅವರು, ಉತ್ತಮ ವೇಗ ಹೊಂದಿರುವ ಭಾರತೀಯರು ಈಗಾಗಲೇ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಇರಿಸಿದ್ದಾರೆ. 2047ಕ್ಕೂ ಮುಂಚಿತವಾಗಿಯೇ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಹೇಳಿದ್ಧಾರೆ.

ಜಿ-20 ಶೃಂಗಸಭೆಯ ಯಶಸ್ಸನ್ನು ಉಲ್ಲೇಖಿಸಿ ಮಾತನಾಡಿದ ಕೈಲಾಶ್, ​ ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ದಿಯ ಹಿತದೃಷ್ಟಿಯಿಂದ ಕರೆ ಕೊಟ್ಟಿರುವ ಅಮೃತಕಾಲ ಯೋಜನೆಗೆ ಸಂಬಂಧಿಸಿದಂತೆ ಬಾಲಿವುಡ್​ ಪ್ರಮುಖ ಪಾತ್ರ ವಹಿಸಲಿದೆ. ಇತ್ತೀಚಿನ ವರ್ಷಗಳಲ್ಲಿ ವಿಶ್ವದಲ್ಲಿ ಭಾರತದ ಚಿತ್ರಣವು ಹೆಚ್ಚು ಪ್ರಾಮುಖ್ಯತೆಯನ್ನು ಗಳಿಸಿದ್ದು, 2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಲಿದೆ.

ಚಿತ್ರೋದ್ಯಮ ರಚನಾತ್ಮಕ, ಸಕಾರಾತ್ಮಕವಾಗಿ ಕೆಲಸ ಮಾಡಬೇಕಾಗಿದೆ. ಕಲೆ ಮತ್ತು ಸಂಸ್ಕೃತಿ ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿಶ್ವದಾದ್ಯಮತ ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತವು ವಿಶ್ವದಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದಿದೆ. ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ನಾಯಕರು ಸಹ ಮೋದಿಯ ನಾಯಕತ್ವದಿಂದ ಹೆಚ್ಚು ಪ್ರಭಾವಿತರಾಗಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!