ಭೀಕರ ಸರಣಿ ಅಪಘಾತ: ದಂಪತಿ ಸ್ಥಳದಲ್ಲೇ ಸಾವು, ಮಗುವಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ದಂಪತಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಮಂಗಳವಾರ ತಡರಾತ್ರಿ ನಡೆದಿದೆ.

ಶಿವಮೊಗ್ಗ ಮೂಲದ ಸೈಯದ್ ಆಸಿಫ್ (38) ಹಾಗೂ ಮಜಿನಾ (33) ಮೃತ ದುರ್ದೈವಿಗಳು. ಇನ್ನು ಈ ದಂಪತಿಯ 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿರುವಾಗ ಬೈಕ್‌ಗೆ ಟಿಪ್ಪರ್ ಲಾರಿ ಚಾಲಕ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!