ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರ್ಖಾನೆಯೊಂದರ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬುಧವಾರ ದೆಹಲಿಯ ಕರೊಲ್ ಬಾಗ್‌ನಲ್ಲಿ ನಡೆದಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ರಾತ್ರಿ 8.20ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ 15 ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.