ಹೊಸದಿಗಂತ ಡಿಜಿಟಲ್ ಡೆಸ್ಕ್:
30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಇದ್ದಕ್ಕಿದ್ದಂತೆ ನೀರಿನಲ್ಲಿ ಮಗುಚಿ ಬಿದ್ದಿರುವ ಘಟನೆ ಬಿಹಾರ ರಾಜ್ಯದಲ್ಲಿ ನಡೆದಿದೆ.
ಗುರುವಾರ ಬೆಳಗ್ಗೆ ಬಿಹಾರದ ಮುಜಾಫರ್ಪುರ ಜಿಲ್ಲೆಯ ಭಾಗಮತಿ ನದಿಯಲ್ಲಿ ದೋಣಿ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಎಸ್ಡಿಎರ್ಎಫ್ ಪಡೆಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.
ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದೆ..ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಮಕ್ಕಳ ಪೋಷಕರು ಸ್ಥಳದಲ್ಲಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ ರಕ್ಷಿಸಿದ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.