ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ವಿಮಾನ ನಿಲ್ದಾಣದಲ್ಲಿ ಖಾಸಗಿ ಚಾರ್ಟರ್ಡ್ ವಿಮಾನವು ಇಳಿಯುವಾಗ ಅಪಘಾತಕ್ಕೀಡಾಗಿದೆ.
ವಿಮಾನದಲ್ಲಿ ಆರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಡಿಜಿಸಿಎ ತಿಳಿಸಿದೆ.
ವಿಶಾಖಪಟ್ಟಣಂನಿಂದ ಮುಂಬೈಗೆ ತೆರಳುತ್ತಿದ್ದ ವಿಎಸ್‌ಆರ್ ವೆಂಚರ್ಸ್ ಲಿಯರ್ಜೆಟ್ 45 ವಿಮಾನ ವಿಟಿ-ಡಿಬಿಎಲ್ ಮುಂಬೈ ವಿಮಾನ ನಿಲ್ದಾಣದ ರನ್ವೇ -27 ರಲ್ಲಿ ಇಳಿಯುವಾಗ ಸ್ಕಿಡ್ ಆಗಿದೆ ಎಂದು ಡಿಜಿಸಿಎ ತಿಳಿಸಿದೆ.