ಅಕ್ರಮ ಮದ್ಯದ ಮೇಲೆ ನಿಗಾ ಇಡಿ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ್ದಲ್ಲಿ ಅಕ್ರಮ ಮದ್ಯ ನುಸುಳುವಿಕೆ (Illegal liqour supply) ತಪ್ಪಿಸಿ, ಬಾಕಿ ತೆರಿಗೆ ವಸೂಲಿ ಮಾಡಿ ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿ ಸಾಧಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಬಕಾರಿ ಇಲಾಖೆ (Excise department) ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಇಲಾಖೆಯ ಪ್ರಸಕ್ತ ವರ್ಷದ ರಾಜಸ್ವ ಸಂಗ್ರಹ ಗುರಿ 36,000 ಕೋಟಿ ಇದ್ದು, ತೆರಿಗೆ ಸಂಗ್ರಹದ ಬೆಳವಣಿಗೆ ದರ 5.31% ರಷ್ಟಿದೆ. ನಿಗದಿತ ಗುರಿ ಸಾಧನೆಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚಿಸಿದರು.

ರಾಜ್ಯದ ಗಡಿ ಭಾಗಗಳಲ್ಲಿ, ವಿಶೇಷವಾಗಿ ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಣಿಕೆ ಕುರಿತು ಜಾರಿ ದಳದವರು ಹೆಚ್ಚಿನ ನಿಗಾ ವಹಿಸಬೇಕು. ಕಳ್ಳಭಟ್ಟಿ ಮದ್ಯ ತಯಾರಿಕೆ ಮತ್ತು ಮಾರಾಟವನ್ನು ಮಟ್ಟಹಾಕುವಂತೆ ಎಂದು ಸೂಚಿಸಿದರು.

ಎಲ್ಲ ಕಡೆ ಜಾಗೃತದಳ ಕಟ್ಟೆಚ್ಚರ ವಹಿಸಬೇಕು. ಎಲ್ಲ ಉಪ ಆಯುಕ್ತರು ರಾಜಸ್ವ ಸಂಗ್ರಹ ಹೆಚ್ಚಳಕ್ಕೆ ಆದ್ಯತೆ ನೀಡಬೇಕು.ಹಳೆ ಬಾಕಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!