ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಈ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸರು ದಾಖಲಿಸಿರುವ ಪ್ರಥಮ ಮಾಹಿತಿ ವರದಿ (ಎಫ್ಐಆರ್) ಯಲ್ಲಿ ಮಮ್ಮನ್ ಖಾನ್ ಅವರ ಹೆಸರಿದೆ. ಕಳೆದ ವಾರ ಪೊಲೀಸರು ಮಮ್ಮನ್ ಖಾನ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಇಂದು ಅವರನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಯಾತ್ರೆಯ ನಂತರ ಸಂಭವಿಸಿದ ಹಿಂಸಾಚಾರದಲ್ಲಿ ಖಾನ್ ಭಾಗಿಯಾಗಿರುವುದ್ದಕ್ಕೆ ಸಾಕಷ್ಟು ಪುರಾವೆಗಳು ಇದೆ ಎಂದಿದ್ದಾರೆ.
ಜುಲೈ 31ರಂದು ನಹ್ ನಲ್ಲಿ ವಿಶ್ವಹಿಂದೂ ಪರಿಷತ್ ನೇತೃತ್ವದ ಮೆರವಣಿಗೆಯ ಮೇಲೆ ಗುಂಪೊಂದು ದಾಳಿ ನಡೆಸಿತ್ತು. ದಾಳಿ ವೇಳೆ ಆರು ಜನರು ಸಾವನ್ನಪ್ಪಿದ್ದರು. ಈ ಘಟನೆ ಹಿಂಸಾಚಾರಕ್ಕೆ ತಿರುಗಿತ್ತು.