ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 4ಕ್ಕೆ ಮುಂದೂಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಸಿಸೋಡಿಯಾ ಅವರನ್ನು ಬಂಧಿಸಿತ್ತು. ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಸಿಸೋಡಿಯಾ ಅವರನ್ನು ಪ್ರಮುಖ ಆರೋಪಿ ಎಂದು ಇ.ಡಿ ಆರೋಪಿಸುತ್ತಿದೆ.