ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ಮುಡಾದಿಂದ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿದೆ .
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಸಿದಂತೆ ತನಿಖೆ ಕೈಕೊಂಡಿರುವ ಲೋಕಾಯುಕ್ತ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೇಸ್ ಡೈರಿ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸುವ ಮೂಲಕ ಕ್ಲೀನ್ ಚಿಟ್ ನೀಡಿತ್ತು. ಇದನ್ನು ಪ್ರಶ್ನಿಸಿ ದೂರುದಾದ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ್ದ ಕೋರ್ಟ್, ಲೋಕಾಯುಕ್ತ ಪೊಲೀಸರಿಗೆ ಕೇಸ್ ಡೈರಿ ಸಲ್ಲಿಸುವಂತೆ ಸೂಚಿಸಿತ್ತು. ಅಲ್ಲದೇ ಬಿ ರಿಪೋರ್ಟ್ ಬಗ್ಗೆ ವಾದಗಳಿದ್ದರೆ ಸಲ್ಲಿಸುವಂತೆ ಸ್ನೇಹಮಯಿ ಕೃಷ್ಣಗೂ ನೋಟಿಸ್ ನೀಡಿತ್ತು.

