ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದುರಂತ ಘಟನೆ ಉತ್ತರ ಪ್ರದೇಶದಲ್ಲಿ ಶನಿವಾರ ಮುಂಜಾನೆ ನಡೆದಿದೆ.
ಲಕ್ನೋದ ಆನಂದ್ ನಗರ ಪ್ರದೇಶದಲ್ಲಿರುವ ಹಳೆಯದಾದ ರೈಲ್ವೇ ಕಾಲೋನಿಯಲ್ಲಿ ಮನೆ ಮೇಲ್ಛಾವಣಿ ಕುಸಿದಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ.
ವಿಷಯ ತಿಳಿದ ಕೂಡಲೇ ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ಮತ್ತು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಕುಟುಂಬ ಸದಸ್ಯರನ್ನು ಅವಶೇಷಗಳಿಂದ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದುರದೃಷ್ಟವಶಾತ್ ಅವರು ಸಾವನ್ನಪ್ಪಿದ್ದಾರೆಂದು ವೈದ್ಯರು ತಿಳಿಸಿದರು ಎಂದು ಪೂರ್ವ ಡಿಸಿಪಿ ಹೃದೇಶ್ ಕುಮಾರ್ ಹೇಳಿದ್ದಾರೆ.