ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳಎರಡನೇ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ.
ಸತತ ಎರಡನೇ ಪಂದ್ಯದಲ್ಲೂ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಆದಾಗ್ಯೂ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ತಂಡದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಅನಾರೋಗ್ಯ ಕಾರಣದಿಂದಾಗಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಯಾಗಿ ಸ್ನೇಹ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇ
ಭಾರತ ತಂಡದ ಪ್ಲೇಯಿಂಗ್ 11: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಅಮಂಜೋತ್ ಕೌರ್, ಅರುಂಧತಿ ರೆಡ್ಡಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಶ್ರೀ ಚರಣಿ.
ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ನೀಲಾಕ್ಷಿಕಾ ಸಿಲ್ವಾ, ಕೌಶಿನಿ ನುತ್ತಯಂಗನಾ (ವಿಕೆಟ್ ಕೀಪರ್), ಕವಿಶಾ ದಿಲ್ಹಾರಿ, ಮಲ್ಕಿ ಮುದಾರ, ಇನೋಕಾ ರಣವೀರ, ಕಾವ್ಯಾ ಕವಿಂದಿ, ಶಶಿನಿ ಗಿಮ್ಹಾನಿ.

