ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಬದ್ಧ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ ಕಲಬುರಗಿ:

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಸಿ.ಎಂ. ಸಿದ್ದರಾಮಯ್ಯ ಅವರಿಂದ ದ್ವಜಾರೋಹಣ ನೆರವೇರಿತು. ತದನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಕಲ್ಯಾಣ ಕನಾ೯ಟಕ ಭಾಗದ ಸಮಗ್ರ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದ್ದು,ಈಗಾಗಲೇ ಈ ಭಾಗದ ಅಭಿವೃದ್ಧಿಗೆ 5000 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣದ ಮಾದರಿಯನ್ನು ಇಂಡಿಯನ್ ಪಬ್ಲಿಕ್ ಹೆಲ್ತ್ ಸ್ಟಾಂಡರ್ಡ್ ಅನ್ವಯ ನಿಗದಿ ಪಡಿಸಲು ಕ್ರಮಕೈಗೊಳ್ಳಲು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ ಎಂದರು.

ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಪರಿಣಾಮ ಇದನ್ನು ಸರಿಪಡಿಸಲು ಕೆಕೆಆರ್‌ಟಿಸಿ ಗೆ 100 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸದಾಗಿ 250 ಬಸ್ ಖರೀದಿಗೆ ಇತ್ತೀಚೆಗೆ ಜರುಗಿದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರಡಿಬಿ ಅಧ್ಯಕ್ಷ,ಶಾಸಕ ಡಾ.ಅಜಯ್ ಸಿಂಗ್,ಶಾಸಕರುಗಳಾದ ಬಿ.ಆರ್.ಪಾಟೀಲ್, ಎಂ.ವೈ.ಪಾಟೀಲ್, ಅಲ್ಲಂಪ್ರಭು ಪಾಟೀಲ್, ಖನೀಜ್ ಫಾತೀಮಾ,ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮತ್ತು ತಿಪ್ಪಣಪ್ಪಾ ಕಮಕನೂರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!