ಮಹಿಳೆಯರಿಗೆ ಕಿರುಕುಳ ನೀಡಿದರೆ ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಅಪರಾಧಿಗಳಿಗೆ ಯೋಗಿ ವಾರ್ನಿಂಗ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಯಾವುದೇ ಮಹಿಳೆಯರ ಮೇಲೆ ಹಲ್ಲೆ, ಕಿರುಕುಳದಂಥ ಘಟನೆಗಳು ಆಗಕೂಡದು, ಒಂದೇ ವೇಳೆ ಇಂಥ ಅಪರಾಧ ಮಾಡಿದ್ದು ಗೊತ್ತಾದರೆ ಅವರಿಗೆ ಯಮರಾಜ ಕಾಯುತ್ತಿದ್ದಾನೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಅಂಬೇಡ್ಕರ್‌ನಗರದಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕಿರುಕುಳ ನೀಡುವ ಯತ್ನದಲ್ಲಿ ವಿದ್ಯಾರ್ಥಿನಿಯೊಬ್ಬಳ ‘ದುಪಟ್ಟಾ’ ಎಳೆದಿದ್ದರಿಂದ ಆಕೆ ತನ್ನ ಬೈಸಿಕಲ್‌ನಿಂದ ಬಿದ್ದಿದ್ದಳು. ಇದರಿಂದಾಗಿ ಆಕೆಯ ಹಿಂದೆಯೇ ಬರುತ್ತಿದ್ದ ಮತ್ತೊಬ್ಬ ಮೋಟಾರ್‌ಸೈಕ್ಲಿಸ್ಟ್‌ನಿಂದ ಆಕೆಯ ಮೈಮೇಲೆ ಬೈಕ್‌ ಹರಿಸಿದ್ದರಿಂದ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಳು.

ಈ ಘಟನೆಯ ಯೋಗಿ ಆದಿತ್ಯನಾಥ್‌ ಆಕ್ರೋಶಗೊಂಡಿದ್ದು, ಮಹಿಳೆಯರಿಗೆ ಕಿರುಕುಳ ನೀಡುವಂಥ ಅಪರಾಧ ಕೃತ್ಯ ಎಸಗಿದರೆ, ಅವರಿಗಾಗಿ ಸಾವಿನ ದೇವರು ಯಮರಾಜ ಕಾಯ್ತಾ ಇರ್ತಾನೆ ಎಂದು ಎಚ್ಚರಿಸಲು ಬಯಸುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಒತ್ತಿ ಹೇಳಿದರು.

ಬಾಲಕಿ ಸಾವನ್ನಪ್ಪಿದ ಘಟನೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಶನಿವಾರ ರಾತ್ರಿಯ ವೇಳೆಗೆ ಮೂವರೂ ಆರೋಪಿಗಳನ್ನು ಬಂಧಿಸಲುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಇಬ್ಬರು ಆರೋಪಿಗಳಿಗೆ ಬುಲೆಟ್‌ ಗಾಯಗಳಾಗಿದ್ದಾರೆ, ಭಾನುವಾರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಒಬ್ಬ ವ್ಯಕ್ತಿಯ ಕಾಲು ಮುರಿದು ಹೋಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!