ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೈತ್ರಾ ಕುಂದಾಪುರ ಗ್ಯಾಂಗ್ನ ಪ್ರಮುಖ ಆರೋಪಿ ಹಾಲಶ್ರೀಯನ್ನು ಪೊಲೀಸರು ಒಡಿಶಾದಲ್ಲಿ ಬಂಧಿಸಿದ್ದಾರೆ.
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಭಿನವ ಹಾಲಶ್ರೀಯನ್ನು ಪೊಲೀಸರು ಬಂಧಿಸಿದ್ದಾರೆ.
ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ರಾತ್ರಿ ಹಾಲಶ್ರೀ ಬೆಂಗಳೂರಿಗೆ ಕರೆತರಲಿದ್ದಾರೆ.