ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಚಂಬಾದಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.1 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆ (IMD), ಮಂಗಳವಾರ ರಾತ್ರಿ 9.15ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಕಂಪನ ಬಿಂದುವನ್ನು ಭೂಮಿಯ ಮೇಲ್ಮೈಯಿಂದ 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.