ಸಾಮಾಜಿಕ ಜಾಲತಾಣಗಳ ಬಳಕೆಗೆ ವಯೋಮಿತಿ ನಿಗದಿ, ಹೈಕೋರ್ಟ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಲು ವಯಸ್ಸಿನ ಮಿತಿ ಇರಬೇಕೇ? ಮದ್ಯಪಾನಕ್ಕೆ ಕಾನೂನುಬದ್ಧ ವಯಸ್ಸು ಇರುವಂತೆ ಸಾಮಾಜಿಕ ಜಾಲತಾಣಗಳ ಬಳಕೆಗೂ ವಯೋಮಿತಿಯನ್ನು ಜಾರಿಗೆ ತಂದರೆ ಸೂಕ್ತ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಶಾಲೆಗೆ ಹೋಗುವ ಮಕ್ಕಳಿಗೂ ಸಾಮಾಜಿಕ ಜಾಲತಾಣಗಳು ಬೇಕೇ ಬೇಕು, ಸೋಶಿಯಲ್ ಮೀಡಿಯಾ ಅಡಿಕ್ಷನ್ ದೂರಮಾಡುವ ಬಗ್ಗೆ ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.

ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ 2021ರ ಫೆ. ಮತ್ತು 2022ರ ಅವಧಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಆಕ್ಷೇಪಿಸಿ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ ಸಂಸ್ಥೆ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆದಿದೆ. ನ್ಯಾಯಮೂರ್ತಿ ಜಿ.ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠ ಸಾಮಾಜಿಕ ಜಾಲತಾಣ ನಿರ್ಬಂಧಿಸಿ ನೋಡಿ ಖಂಡಿತಾ ಉತ್ತಮ ಬದಲಾವಣೆ ಕಾಣುತ್ತದೆ ಎಂದು ಸಲಹೆ ನೀಡಿದೆ.

ಮತದಾನಕ್ಕೆ ಹೇಗೆ 21 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅದೇ ಮಾದರಿಯಲ್ಲಿ ಸೋಶಿಯಲ್ ಮೀಡಿಯಾ ಬಳಕೆ ಮಾಡಲು ಕನಿಷ್ಠ 21 ವರ್ಷ ಆಗಿರಬೇಕು ಎಂದು ನಿಗದಿಪಡಿಸುವುದು ಒಳಿತು ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!