ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ನಟ ಪ್ರಕಾಶ್ ರಾಜ್‌ಗೆ ಜೀವ ಬೆದರಿಕೆ ಹಾಕಿದ್ದ ಯುಟ್ಯೂಬ್ ಚಾನೆಲ್ ಮೇಲೆ ಎಫ್‌ಐಆರ್ ದಾಖಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಯುಟ್ಯೂಬ್ ಚಾನೆಲ್ ಮುಖಾಂತರ ಪ್ರಕಾಶ್ ರಾಜ್‌ಗೆ ಜೀವ ಬೆದರಿಕೆ ಹಾಕಿದ್ದು, ಪೊಲೀಸರಿಗೆ ದೂರು ನೀಡಲಾಗಿತ್ತು. ಇದೀಗ ವಿಡಿಯೋ ಅಪ್‌ಲೋಡ್ ಮಾಡಿದ ಯುಟ್ಯೂಬ್ ಚಾನೆಲ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಆಗಸ್ಟ್ ೧೪ರಂದು ಪ್ರಕಾಶ್ ರಾಜ್ ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿದ ರೀತಿಯ ವಿಡಿಯೋಗಳನ್ನು ಅಪ್ಲೋಡ್ ಮಾಡಲಾಗಿತ್ತು.