ಕಾವೇರಿ ನೀರು: CWMA ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾವೇರಿ ನದಿ ನೀರು ವಿಚಾರದಲ್ಲಿ ಸಿಡಬ್ಲ್ಯೂಎಂಎ ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸಚಿವರು ಮತ್ತು ಸರ್ವಪಕ್ಷಗಳ ಸಂಸದರೊಂದಿಗೆ ಸಭೆ ನಡೆಸಿದ ನಂತರ ಅವರು ಮಾತನಾಡಿದರು.

ಸಿಡಬ್ಲ್ಯೂಎಂಎ ಆದೇಶಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ತಡೆಯಾಜ್ಞೆ ಕೋರಲಿದ್ದೇವೆ. ತಮಿಳುನಾಡಿಗೆ ನೀರು ಬಿಡುವಂತೆ ಸಿಡಬ್ಲ್ಯೂಎಂಎ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ನಾವು ಸುಪ್ರೀಂ ಕೋರ್ಟ್ ಗೆ ಮನವಿ ಮಾಡುತ್ತೇವೆ. ನಮ್ಮ ನೈಜ ಪರಿಸ್ಥಿತಿಯನ್ನು ಪ್ರಸ್ತುತಪಡಿಸಿದ್ದೇವೆ. 123 ವರ್ಷಗಳಲ್ಲಿ ಈ ವರ್ಷದ ಆಗಸ್ಟ್​ನಲ್ಲಿ ಅತ್ಯಂತ ಕಡಿಮೆ ಮಳೆಯಾಗಿದ್ದು, ಹೆಚ್ಚಿನ ಸಂಕಷ್ಟಕ್ಕೆ ಕಾರಣವಾಗಿದೆ. ನಮಗೇ ಕುಡಿಯುವ ನೀರಿಲ್ಲ, ಬೆಳೆ ರಕ್ಷಣೆಗೆ ನೀರಿಲ್ಲ, ಕೈಗಾರಿಕೆಗಳಿಗೆ ನೀರಿಲ್ಲ. ನಾವು ಸಾಕಷ್ಟು ತೊಂದರೆಯಲ್ಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಎರಡೂ ರಾಜ್ಯಗಳೊಂದಿಗೆ ಮಾತನಾಡುವ ಅಧಿಕಾರ ಪ್ರಧಾನಿಗೆ ಇದೆ. ಆದ್ದರಿಂದ ನಾವು ಪ್ರಧಾನಿಯವರ ಮಧ್ಯಪ್ರವೇಶಕ್ಕಾಗಿ ಮನವಿ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ನುಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!