ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ,ಸಚಿವ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.
ಈ ಹಿಂದೆ ಸನಾತನ ಧರ್ಮ ಡೆಂಘಿ-ಮಲೇರಿಯಾ ಇದ್ದ ಹಾಗೆ ಎಂದು ಕೆಲವು ದಿನಗಳ ಹಿಂದೆ ಹೇಳಿದ್ದ ಉದಯನಿಧಿ ಮಾತಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
ಉದಯನಿಧಿಯ ಅವಹೇಳನಕಾರಿ ಹೇಳಿಕೆಯನ್ನು ಅನೇಕ ನಾಯಕರು ಖಂಡಿಸಿದ್ದರು. ಮಾತ್ರವಲ್ಲ ಹಿಂದೂಪರ ಸಂಘಟನೆಗಳು ಪ್ರತಿಭಟನೆಯನ್ನೂ ನಡೆಸಿದ್ದವು. ಅದಾಗ್ಯೂ ಉದಯನಿಧಿ ಇನ್ನೊಮ್ಮೆ ಸನಾತನ ಧರ್ಮದ ಬಗ್ಗೆ ಅಪಮಾನಕಾರಿಯಾಗಿ ಮಾತನಾಡಿದ್ದಾರೆ.
ಸನಾತನ ಧರ್ಮವನ್ನು ನಿರ್ಮೂಲನೆಗೊಳಿಸಿದರೆ ಅಸ್ಪ್ರಶ್ಯತೆ ತೊಲಗುತ್ತದೆ ಎಂದು ಅವರು ಹೇಳಿದ್ದಾರೆ.
ಅಸ್ಪೃಶ್ಯತೆ ಹೋಗಲಾಡಿಸಲು ಸಂತಾನ ಧರ್ಮವನ್ನು ತೊಡೆದುಹಾಕಬೇಕು ಎಂದು ನಾವು ಹೇಳುತ್ತೇವೆ, ಸನಾತನ ನಾಶವಾದರೆ ಅಸ್ಪೃಶ್ಯತೆಯೂ ನಾಶವಾಗುತ್ತದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.