ಹೊಸದಿಗಂತ ವರದಿ, ಮಡಿಕೇರಿ:
ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಮಡಿಕೇರಿ ಮೆಡಿಕಲ್ ಕಾಲೀಜಿನ ವಿದ್ಯಾರ್ಥಿಗಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ವಿಜೇಶ್ ಹಾಗೂ ಶಿವಾನಂದ ಎಂದು ಗುರುತಿಸಲಾಗಿದ್ದು, ಇವರಿಬ್ಬರು ಉಡುಪಿಯಿಂದ ಮಡಿಕೇರಿ ಕಡೆಗೆ ಬೈಕ್’ನಲ್ಲಿ ಬರುತ್ತಿದ್ದಾಗ ಕಾಟಕೇರಿ ಬಳಿ ಈ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ವಿಜೇಶ್ ಹಾಗೂ ಶಿವಾನಂದ ಅವರ ಹೊಟ್ಟೆ ಭಾಗಕ್ಕೆ ಗಾಯವಾಗಿದ್ದು, ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಬ್ಬರು ಸವಾರರೂ ಹೆಲ್ಮೆಟ್ ಧರಿಸಿದ್ದರು ಎನ್ನಲಾಗಿದ್ದು, ಅಪಘಾತದಲ್ಲಿ ಬೈಕ್’ನ ಮುಂಭಾಗ ನಜ್ಜುಗುಜ್ಜಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.