ರೈತನ ಬೆನ್ನೆಲುಬು ಕಾವೇರಿ: ನಟ ಶಿವರಾಜ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾವೇರಿ ಕುರಿತು ಸ್ಯಾಂಡಲ್ ವುಡ್ ತಾರೆಯರು ಮೌನ ಮುರಿದಿದ್ದು, ಶಿವರಾಜ್ ಕುಮಾರ್ (Shivaraj Kumar) ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ರೈತನ ಬೆನ್ನೆಲುಬು ಕಾವೇರಿ. ರಾಜ್ಯದಲ್ಲಿ ಈಗಾಗಲೇ ಮಳೆಯ ಅಭಾವ ಇರುವ ಕಾರಣದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಎರಡು ರಾಜ್ಯಗಳ ನಾಯಕರು, ನ್ಯಾಯಾಲಯ ಇದಕ್ಕೊಂದು ಸಮಾಧಾನಕರ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಇದು ನನ್ನ ಪ್ರಾರ್ಥನೆ ಕೂಡ ಆಗಿದೆ’ ಎಂದಿದ್ದಾರೆ.

ಹಲವು ದಿನಗಳಿಂದ ಮಂಡ್ಯ ಭಾಗದ ರೈತರು ಕಾವೇರಿ ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ರೈತರು, ರೈತ ಸಂಘಗಳು ಮತ್ತು ಕನ್ನಡಪರ ಹೋರಾಟಗಾರು ಈ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದರೂ, ಕನ್ನಡ ಸಿನಿಮಾ ರಂಗದವರು ಮಾತ್ರ ಮೌನವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!