ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾವೇರಿ ನದಿ ನೀರು ಹರಿಸುವ ವಿಚಾರವಾಗಿ ತುಮಿಳುನಾಡು ಸಲ್ಲಿಸಿದ್ದ ಮಹತ್ವದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್‌ ಕೈಗೆತ್ತುಕೊಳ್ಳಲಿದೆ.

ಕರ್ನಾಟಕ – ತಮಿಳುನಾಡು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಇಂದು ಬೆಳಿಗ್ಗೆ 10.30ಕ್ಕೆ ನ್ಯಾ.ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರಲಿದೆ. ವಿಚಾರಣೆ ವೇಳೆ ಕರ್ನಾಟಕ ತನ್ನ ಪರಿಸ್ಥಿತಿಯನ್ನು ನ್ಯಾಯಪೀಠಕ್ಕೆ ಅರ್ಥ ಮಾಡಿಸುವ ಪ್ರಯತ್ನ ನಡೆಯಲಿದೆ.

ಸೆಪ್ಟೆಂಬರ್ 26ರ ತನಕ ತಮಿಳುನಾಡಿಗೆ ನಿತ್ಯವೂ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಪರಿಸ್ಥಿತಿ ಅರ್ಥಮಾಡಿಕೊಳ್ಳುವಲ್ಲಿ ಪ್ರಾಧಿಕಾರ ವಿಫಲವಾಗಿದೆ. ಒಳಹರಿವು ಕಡಿಮೆಯಾಗಿರುವುದರಿಂದ ನೀರು ಹರಿಸುವುದು ಕಷ್ಟವಾಗುತ್ತಿದೆ. ಪ್ರಾಧಿಕಾರದ ಹಿಂದಿನ ಎಲ್ಲ ಆದೇಶಗಳನ್ನು ನಾವು ಪಾಲಿಸಿದ್ದೇವೆ. ಹೀಗಾಗಿ ಪ್ರಾಧಿಕಾರದ ಪ್ರಸ್ತುತ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರಾಜ್ಯ ಸರ್ಕಾರ ಅರ್ಜಿಯಲ್ಲಿ ಮನವಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!