ಬೆಂಗಳೂರು ನಗರವಾಸಿಗಳೇ ಗಮನಿಸಿ, ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರ ವಾಸಿಗಳೇ ಗಮನಿಸಿ, ನಾಳೆ ನಗರದ ನಾನಾ ಕಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಬಹುದು.

ತಾತಗುಣಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ ಹಾಗೂ ಕರೆಂಟ್ ಟ್ರಾನ್ಸ್‌ಫಾರ್ಮರ್ ಸ್ಥಾಪನೆ ಹಾಗೂ ಪರಿಶೀಲನೆ ನಡೆಯಲಿದ್ದು, ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

ನಾಳೆ ಬೆಳಗ್ಗೆ 10 ರಿಂದ 12 ಗಂಟೆವರೆಗೆ ಇಡೀ ನಗರಕ್ಕೆ ನೀರು ಪೂರೈಕೆ ಆಗುವುದಿಲ್ಲ. ಹಿಂದಿನ ದಿನವೇ ನೀರು ಸಂಗ್ರಹಣೆ ಮಾಡಿಟ್ಟುಕೊಳ್ಳುವುದು ಉತ್ತಮವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!