ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ನೀಡುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭರವಸೆ ನೀಡಿದ್ದಾರೆ ಎಂದು ಸಂಸದ ನಳಿನ್‌ಕುಮಾರ್ ಕಟೀಲು ತಿಳಿಸಿದ್ದಾರೆ.
ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ನೀಡುವಂತೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಸಚಿವರು ಈ ಭರವಸೆ ನೀಡಿದ್ದಾರೆ.
ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್‌ವರೆಗೆ ವಿಸ್ತರಿಸುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಸಚಿವರನ್ನು ನಳಿನ್ ಅವರು ಒತ್ತಾಯಿಸಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ.
ಪ್ರತಿದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ್ಯ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ಒಪ್ಪಿಗೆ ರೈಲ್ವೆ ಸಚಿವರು ಒಪ್ಪಿಗೆ ನೀಡಿದ್ದಾರೆ.
ರೈಲ್ವೆ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಪ್ರತಿಕ್ರಿಯಿಸಿದ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಬವನ್ನು ನಿವಾರಣೆಯ ಬಗ್ಗೆ ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಬವನ್ನು ನಿವಾರಣೆ ಮಾಡುವಂತೆ ಸಂಬಂಸಿದ ಅಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ ಎಂದು ನಳಿನ್‌ಕುಮಾರ್ ತಿಳಿಸಿದ್ದಾರೆ.