ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ನ ಹೀರಾ ಪನ್ನಾ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ಘಟನೆಯಲ್ಲಿ 14 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ್ ಜೋಗೇಶ್ವರಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ 3.10ರ ಸುಮಾರಿ ಈ ಘಟನೆ ಸಂಭವಿಸಿದೆ. ಕೂಡಲೇ ಕಾರ್ಯಾಚರಣೆ ನಡೆಸಿ 14 ಮಂದಿಯನ್ನು ರಕ್ಷಿಸಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಸಂಭವಿಸಿರಬಹುದು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ 12 ಅಗ್ನಿಶಾಮಕ ವಾಹನ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.