ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗ್ಪುರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆಗಳು ಜಲಾವೃತವಾಗಿವೆ.
ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಕೆಲವು ಪ್ರದೇಶಗಳಲ್ಲಿ ಮನೆಯೇ ಮುಳುಗಿದೆ. ರಕ್ಷಣಾ ತಂಡಗಳು ಜನರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸುತ್ತಿವೆ.
ಕೇವಲ ನಾಲ್ಕು ಗಂಟೆ ಸುರಿದ ಮಹಾಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ನಿಂತಿದ್ದರೂ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ.