ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಿ ಕ್ರಿಕೆಟ್‌ನ ಪ್ರತಿಷ್ಠಿತ ಏಕದಿನ ಟೂರ್ನಿ ‘ವಿಜಯ ಹಝಾರೆ ಟ್ರೋಫಿ’ಯ ಮೊದಲ ದಿನವೇ ಸ್ಟಾರ್ ಆಟಗಾರರ ಮಿಂಚಿನ ಸಂಚಲನ ಶುರುವಾಗಿದೆ. ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಅಖಾಡಕ್ಕಿಳಿಯುವ ಮೂಲಕ ಟೂರ್ನಿಯ ಮೆರುಗು ಹೆಚ್ಚಿಸಿದ್ದಾರೆ.
ಬೆಂಗಳೂರಿನ ಸೆಂಟರ್ ಆಫ್ ಎಕ್ಸ್ಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದೆಹಲಿ ಮತ್ತು ಆಂಧ್ರ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ದೆಹಲಿ ತಂಡದ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ದೀರ್ಘಕಾಲದ ನಂತರ ವಿರಾಟ್ ಕೊಹ್ಲಿ ಅವರು ದೆಹಲಿ ಪರ ಕಣಕ್ಕಿಳಿದಿರುವುದು ಅಭಿಮಾನಿಗಳಲ್ಲಿ ಸಖತ್ ಕುತೂಹಲ ಮೂಡಿಸಿದೆ.
ದೆಹಲಿ XI: ಅರ್ಪಿತ್ ರಾಣಾ, ಪ್ರಿಯಾಂಶ್ ಆರ್ಯ, ವಿರಾಟ್ ಕೊಹ್ಲಿ, ನಿತೀಶ್ ರಾಣಾ, ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ, ಸಿಮರ್ಜೀತ್ ಸಿಂಗ್, ಹರ್ಷ್ ತ್ಯಾಗಿ, ಇಶಾಂತ್ ಶರ್ಮಾ, ಪ್ರಿನ್ಸ್ ಯಾದವ್, ನವದೀಪ್ ಸೈನಿ.
ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸಿಕ್ಕಿಂ ವಿರುದ್ಧ ಬಲಿಷ್ಠ ಮುಂಬೈ ತಂಡ ಸೆಣಸಾಡುತ್ತಿದೆ. ಸಿಕ್ಕಿಂ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದು, ಶಾರ್ದೂಲ್ ಠಾಕೂರ್ ಸಾರಥ್ಯದ ಮುಂಬೈ ತಂಡದಲ್ಲಿ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿದಿದ್ದಾರೆ. ಯುವ ಬ್ಯಾಟರ್ ಸರ್ಫರಾಝ್ ಖಾನ್ ಕೂಡ ತಂಡದಲ್ಲಿದ್ದಾರೆ.
ಮುಂಬೈ XI: ರೋಹಿತ್ ಶರ್ಮಾ, ಅಂಗ್ಕ್ರಿಶ್ ರಘುವಂಶಿ, ಸರ್ಫರಾಝ್ ಖಾನ್, ಸಿದ್ಧೇಶ್ ಲಾಡ್, ಮುಶೀರ್ ಖಾನ್, ಹಾರ್ದಿಕ್ ತಮೋರ್, ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಶಾರ್ದೂಲ್ ಠಾಕೂರ್ (ನಾಯಕ), ತುಷಾರ್ ದೇಶಪಾಂಡೆ, ಸಿಲ್ವೆಸ್ಟರ್ ಡಿಸೋಝ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಹೈ-ವೋಲ್ಟೇಜ್ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ನೇತೃತ್ವದ ಕರ್ನಾಟಕ ತಂಡವು ಇಶಾನ್ ಕಿಶನ್ ಸಾರಥ್ಯದ ಜಾರ್ಖಂಡ್ ವಿರುದ್ಧ ಸೆಣಸುತ್ತಿದೆ. ಟಾಸ್ ಗೆದ್ದ ಕರ್ನಾಟಕ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಜಾರ್ಖಂಡ್ ಪಡೆಯನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವ ಗುರಿ ಹೊಂದಿದೆ.
ಕರ್ನಾಟಕ XI: ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಕೃಷ್ಣನ್ ಶ್ರೀಜಿತ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ಧ್ರುವ್ ಪ್ರಭಾಕರ್, ವಿದ್ಯಾಧರ್ ಪಾಟೀಲ್, ವಿಜಯ್ ಕುಮಾರ್ ವೈಶಾಕ್, ಅಭಿಲಾಷ್ ಶೆಟ್ಟಿ.

