ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಶುರುವಾಗಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ರಮಿತಾ ಜಿಂದಾಲ್, ಮೆಹುಲಿ ಘೋಷ್, ಆಶಿ ಚೌಕ್ಸೆ ಬೆಳ್ಳಿ ಗೆಲ್ಲುವ ಮೂಲಕ ಪದಕದ ಬೇಟೆ ಆರಂಭಗೊಂಡಿದ್ದು, ಈರವರೆಗೆ ಭಾರತಕ್ಕೆ ಐದು ಪದಕಗಳು ಲಭಿಸಿವೆ.
ರೋಯಿಂಗ್ (Rowing) ಲೈಟ್‌ವೇಟ್ ಪುರುಷರ ಡಬಲ್ ಸ್ಕಲ್ಸ್‌ನಲ್ಲಿ ಅರ್ಜುನ್ ಲಾಲ್ ಜಾಟ್ ಮತ್ತು ಅರವಿಂದ್ ಸಿಂಗ್ 6:28.18 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. ಬಾಬು ಲಾಲ್ ಯಾದವ್ ಮತ್ತು ಲೇಖ್ ರಾಮ್ ರೋಯಿಂಗ್‌ನಲ್ಲಿ ಕಂಚು ಗೆದ್ದಿದ್ದಾರೆ. ರೋಯಿಂಗ್ ಗುಂಪು ವಿಭಾಗದಲ್ಲಿ 8 ಮಂದಿ ಇದ್ದ ಪುರುಷರ ತಂಡ ಬೆಳ್ಳಿ ಪದಕವನ್ನು ಗೆದ್ದಿದೆ.
ಮಹಿಳೆಯರ 10 ಮೀಟರ್ ಏರ್ ರೈಫಲ್ ವೈಯಕ್ತಿಕ ಸ್ಪರ್ಧೆಯಲ್ಲಿ ರಮಿತಾ ಕಂಚಿನ ಪಡೆದಿದ್ದಾರೆ.
ಪದಕ ಬೇಟೆ ಆರಂಭಿಸಿರುವ ಪಟ್ಟಿಯಲ್ಲಿ 10 ಚಿನ್ನದ ಪದಕ ಗೆದ್ದಿರುವ ಚೀನಾ ಮೊದಲ ಸ್ಥಾನದಲ್ಲಿ, ಒಂದು ಚಿನ್ನ ಗೆದ್ದಿರುವ ಹಾಂಕಾಂಗ್ ಎರಡನೇ ಸ್ಥಾನದಲ್ಲಿ ಮತ್ತು 5 ಪದಕ ಗೆದ್ದಿರುವ ಭಾರತ ಮೂರನೇ ಸ್ಥಾನದಲ್ಲಿದೆ.
ಭಾರತದ ಮಹಿಳಾ ಕ್ರಿಕೆಟ್ ತಂಡವು ಬಾಂಗ್ಲಾದೇಶದ ವಿರುದ್ಧ 8 ವಿಕೆಟ್ ಪಡೆದು ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ.