ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಭುಗಿಲೆದ್ದಿರುವ ಕಾವೇರಿ ಕಿಚ್ಚು ಶಮನಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ಮೋದಿ ಮೊರೆ ಹೋಗಿದ್ದಾರೆ.
ಮಧ್ಯಸ್ಥಿಕೆ ವಹಿಸಿ ಎಂದು ದೇವೇಗೌಡರು ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕರ್ನಾಟಕದ ರೈತರು ಕಾವೇರಿಯನ್ನೇ ನಂಬಿಕೊಂಡು ಕೃಷಿಯಲ್ಲಿ ತೊಡಗಿದ್ದಾರೆ. ನಮ್ಮಲ್ಲಿಯೇ ನೀರಿನ ಕೊರತೆ ಇದೆ, ಈ ಸಮಸ್ಯೆಯನ್ನು ಹೇಗಾದರೂ ಬಗೆಹರಿಸಿಕೊಡಿ ಎಂದು ಪತ್ರದಲ್ಲಿ ಬರೆಯಲಾಗಿದೆ.
ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಪ್ರತಿಭಟನೆಗಳು ಮುಂದುವರಿದ್ದಿದ್ದು, ಇಂದು ದಾವಣಗೆರೆ ಬಂದ್‌ಗೆ ಕರೆ ನೀಡಲಾಗಿದೆ. ಇನ್ನು ನಾಳೆ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, 150ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ.