Wednesday, September 10, 2025

ರಾಹುಲ್ ಗಾಂಧಿಗೆ ನೋಟಿಸ್ ಕೊಡೋಕೆ ಅವರು ಯಾರು?: ಚುನಾವಣೆ ಆಯೋಗಕ್ಕೆ ಡಿಕೆಶಿ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಹುಲ್ ಗಾಂಧಿಗೆ ನೋಟಿಸ್ ಕೊಡೋಕೆ ಅವರು ಯಾರು ಎಂದು ಡಿಕೆ ಶಿವಕುಮಾರ್ ಚುನಾವಣೆ ಆಯೋಗಕ್ಕೆ ಪ್ರಶ್ನೆ ಮಾಡಿದ್ದಾರೆ.

ನೋಟಿಸ್ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ