ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ #ಬೆಂಗಳೂರು_ಬಂದ್, #ಕಾವೇರಿ_ನಮ್ಮದು ಹ್ಯಾಶ್ ಟ್ಯಾಗ್ ಬಳಸಿ ತಮ್ಮ ಬೆಂಬಲದ ನಿರ್ಧಾರವನ್ನು ತಿಳಿಸಿದರು.
ʻಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್ ಗೆ ನನ್ನ ಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿರಲಿ, ಬಂದ್ ಯಶಸ್ವಿ ಆಗಲಿ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಕೂಡ ಬಂದ್ ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆʼ. ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.