ಬೆಂಗಳೂರು ಬಂದ್: ರೈತ ಮುಖಂಡ ಕುರುಬೂರು ಶಾಂತಕುಮಾರ್ ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಜಲ ಸಂರಕ್ಷಣಾ ಸಮಿತಿಯ ಮುಖ್ಯಸ್ಥರಲ್ಲಿ ಒಬ್ಬರಾದ ರೈತ ಮುಖಂಡ ಕುರುಬೂರು ಶಾಂತ ಕುಮಾರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಬೆಂಗಳೂರು ಬಂದ್‌ ಆರಂಭವಾದ ಬೆನ್ನಲ್ಲೇ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುರುಬೂರು ಶಾಂತ ಕುಮಾರ್‌ ಅವರನ್ನು ಸರ್ಕಲ್‌ನಲ್ಲೇ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪೊಲೀಸರು ಐಪಿಸಿ ಸೆಕ್ಷನ್‌ 144 ಅಡಿ ಜಾರಿ ಮಾಡಿರುವ ನಿಷೇಧಾಜ್ಞೆ ನಿಯಮದಡಿ ಅವರನ್ನು ಬಂಧಿಸಿದ್ದಾರೆ. ಆದರೆ ಇದೊಂದು ಗೂಂಡಾಗಿರಿ ಎಂದು ಶಾಂತ ಕುಮಾರ್‌ ಮತ್ತು ಅವರ ಬೆಂಬಲಿಗರು ಆಕ್ಷೇಪಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧಿಸಿ ಇಂದು ರೈತ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ನಗರದ ಹಲವಡೆ ಸಂಘಟನೆಗಳು ಪ್ರತಿಭಟನೆ ಕೈಗೊಂಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!