ಖಾಸಗಿ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

ಕೂಡ್ಲಿಗಿ ತಾಲೂಕಿನ ಎಂ.ಬಿ.ಅಯ್ಯನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ.

ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಇದರ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು‌ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕಾನಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!