ಮರಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೆಎಸ್​ಆರ್​ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸ್‌ನ ಒಂದು ಆ‌ಕ್ಸೆಲ್‌ ಕಟ್‌ ಆದ ಪರಿಣಾಮ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ.

ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಹೊರಟಿದ್ದ ಬಸ್‌ನಲ್ಲಿ 50ಕ್ಕೂ ಅಧಿಕ ಪ್ರಯಾಣಿಕರಿದ್ದರು. ಈ ಪೈಕಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಪಘಾತದ ಬಳಿಕ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.

ಗ್ರಾಮಸ್ಥರು ಕೂಡಲೇ ಅಂಬ್ಯುಲೆನ್ಸ್‌ಗೆ ಕರೆ ಮಾಡಿ ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!