ಇಂದು 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿ ಅವರು 9ನೇ ರೋಜ್‌ಗಾರ್ ಮೇಳದಲ್ಲಿ ಇಂದು ಪಾಲ್ಗೊಂಡು ಹೊಸದಾಗಿ ನೇಮಕಗೊಂಡ ಸುಮಾರು 51,000 ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ.

ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಧಾನಿ ಮೋದಿ ನೇಮಕಾತಿ ಪತ್ರ ಹಂಚಿದ್ದಾರೆ. ನೇಮಕಾತಿ ಪತ್ರಗಳನ್ನು ಸ್ವೀಕರಿಸಿದ ಯುವಕರಿಗೆ ಅಭಿನಂದಿಸಿದ್ದಾರೆ.

ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!