ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನಕ್ಕೆ ಮರು ನಾಮಕರಣ ಮಾಡಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನಕ್ಕೆ ʼತಪೋಭವನʼ ಎಂದು ಸಿಎಂ ಸಿದ್ದರಾಮಯ್ಯ ಇಂದು ಮರು ನಾಮಕರಣ ಮಾಡಿದ್ದಾರೆ.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಎಂ ಮಾತನಾಡಿದರು.

ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ರಾಷ್ಟ್ರಪತಿ ಭವನಕ್ಕೆ ತಪೋಭವನ ಎಂದು ಮರುನಾಮಕರಣ ಮಾಡಿದ್ದೇವೆ ಎಂದು ತಿಳಿಸಿದರು.

ಅಲ್ಲದೇ ರಾಷ್ಟಪತಿ ಭವನವನ್ನು ಇನ್ನುಮುಂದೆ ತಪೋಭವನ ಎಂದು ಕರೆಯಬೇಕು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!