ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಪ್ ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ವೇಳೆ ವಿದೇಶಿ ಮಹಿಳೆ ಬಳಿ ಇದ್ದ ಕಂತೆ ಕಂತೆ ದೇಶಿಯ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನಿಂದ ಮುಂಬೈಗೆ ತೆರಳಲು ಏರ್ಪೋರ್ಟ್ಗೆ ವಿದೇಶಿ ಮಹಿಳೆ ಬಂದಿದ್ದು, ಈ ವೇಳೆ ಮಹಿಳೆಯ ಮೇಲೆ ಅನುಮಾನಗೊಂಡ ಭದ್ರತಾಪಡೆ ಸಿಬ್ಬಂದಿ ಬ್ಯಾಗನ್ನು ತಪಾಸಣೆಗೆ ಒಳಪಡಿಸಿದ್ದಾರೆ.
ಈ ವೇಳೆ ವಿದೇಶಿ ಮಹಿಳೆಯ ಬಳಿ ದೇಶಿಯ 15 ಲಕ್ಷ ನಗದು ಗರಿ ಗರಿ ಕಂತೆ ನೋಟುಗಳು ಪತ್ತೆಯಾಗಿವೆ.. ಬಳಿಕ ಹಣದ ಸಮೇತ ಮಹಿಳೆಯನ್ನು ವಶಕ್ಕೆ ಪಡೆದ ಏರ್ಪೋರ್ಟ್ ಭದ್ರತಾ ಸಿಬ್ಬಂದಿ ಆದಾಯ ಇಲಾಖೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ಈ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.