ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೌಶಲ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್ವಿಎನ್ ಭಟ್ಟಿ ಬುಧವಾರ ಹಿಂದೆ ಸರಿಸಿದ್ದಾರೆ.
ಈ ಅರ್ಜಿಯು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್ವಿಎನ್ ಭಟ್ಟಿ ಅವರಿದ್ದ ಪೀಠದ ಮುಂದೆ ವಿಚಾರಣೆಗೆ ಬಂದ ತಕ್ಷಣ, ಖನ್ನಾ ಅವರು, ‘ನನ್ನ ಸಹೋದ್ಯೋಗಿಗೆ (ಎಸ್ವಿಎನ್ ಭಟ್ಟಿ) ಈ ಅರ್ಜಿ ವಿಚಾರಣೆ ನಡೆಸಲು ಸ್ವಲ್ಪ ಕಷ್ಟವಾಗುತ್ತಿದೆ. ಹೀಗಾಗಿ, ಮುಂದಿನ ವಾರ ಮತ್ತೊಂದು ಪೀಠದ ಮುಂದೆ ಪಟ್ಟಿ ಮಾಡಲು ನಾವು ನಿರ್ದೇಶಿಸುತ್ತಿದ್ದೇವೆ’ ಎಂದು ಹೇಳಿದರು.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ನೇತೃತ್ವದ ಪೀಠದ ಮುಂದೆ ತುರ್ತು ವಿಚಾರಣೆಗಾಗಿ ಮನವಿ ಮಾಡಲು ಅನುಮತಿ ನೀಡುವಂತೆ ಚಂದ್ರಬಾಬು ನಾಯ್ಡು ಪರ ಹಾಜರಾಗಿದ್ದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಮನವಿ ಮಾಡಿದರು.