ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಅನೇಕ ಸಂಘಟನೆಗಳು ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈಗಾಗಲೇ ನಾಳಿನ ಬಂದ್ಗೆ ಕನ್ನಡ ಚಿತ್ರೋದ್ಯಮ ಸೇರಿದಂತೆ ಹಲವು ರಂಗಗಳು ಬೆಂಬಲ ಸೂಚಿಸಿದ್ದು, ಇದೀಗ ಬೀದಿ ಬದಿ ವ್ಯಾಪಾರಿಗಳೂ ಕೂಡ ಹೋರಾಟದಲ್ಲಿ ತಾವೂ ಭಾಗಿಯಾಗುವುದಾಗಿ ತಿಳಿಸಿವೆ.
ಈ ಕುರಿತು ಮಾತನಾಡಿದ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ರಂಗಸ್ವಾಮಿ, ಕಾವೇರಿಗಾಗಿ ನಾವೂ ಹೋರಾಟ ಮಾಡಲಿದ್ದು, ಕರ್ನಾಟಕ ಬಂದ್ಗೆ ಬೀದಿ ಬದಿ ವ್ಯಾಪಾರಿಗಳ ಬೆಂಬಲ ಇರುವುದಾಗಿ ತಿಳಿಸಿದರು. ಬೆಳಗ್ಗೆ 6 ರಿಂದ ಸಂಜೆ 6 ವರೆಗೂ ರಾಜ್ಯಾದ್ಯಂತ ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಸ್ಥಳೀಯ ಮಾರುಕಟ್ಟೆ ಬೀದಿ ಬದಿ ವ್ಯಾಪಾರಗಳು ಕೂಡ ಸಂಪೂರ್ಣ ಸ್ಥಗಿತವಾಗಲಿದೆ ಎಂದು ತಿಳಿಸಿದರು.