ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್‌ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಖ್ಯಾತ ಕೃಷಿ ವಿಜ್ಞಾನಿ, ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್‌.ಸ್ವಾಮಿನಾಥನ್‌ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದರು. ಇವರ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.

ಸ್ವಾಮಿನಾಥನ್‌ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ..ʻಡಾ. ಎಂಎಸ್ ಸ್ವಾಮಿನಾಥನ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ದೇಶದ ಇತಿಹಾಸದಲ್ಲಿ ಅತ್ಯಂತ ನಿರ್ಣಾಯಕ ಅವಧಿಯಲ್ಲಿ, ಕೃಷಿ ಕ್ಷೇತ್ರಕ್ಕೆ ಅವರ ಕೊಡುಗೆ ಅದ್ಭುತ. ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಿದ್ದಷ್ಟೇ ಅಲ್ಲದೆ, ನಮ್ಮ ರಾಷ್ಟ್ರಕ್ಕೆ ಆಹಾರ ಭದ್ರತೆಯನ್ನು ಖಾತ್ರಿಪಡಿಸಿತು.

ಕೃಷಿಗೆ ಅವರ ಕ್ರಾಂತಿಕಾರಿ ಕೊಡುಗೆಗಳನ್ನು ಮೀರಿ, ಡಾ. ಸ್ವಾಮಿನಾಥನ್ ನಾವೀನ್ಯತೆಯ ಶಕ್ತಿಕೇಂದ್ರದ ಮಾರ್ಗದರ್ಶಕರಾಗಿದ್ದರು. ಸಂಶೋಧನೆ ಮತ್ತು ಮಾರ್ಗದರ್ಶನಕ್ಕಾಗಿ ಅವರ ಅಚಲವಾದ ಬದ್ಧತೆಯು ಅಸಂಖ್ಯಾತ ವಿಜ್ಞಾನಿಗಳು ಮತ್ತು ಆವಿಷ್ಕಾರಕರ ಮೇಲೆ ಅಳಿಸಲಾಗದ ಹೆಜ್ಜೆ ಗುರುತು ಹಾಕಿದೆ.

ಡಾ. ಸ್ವಾಮಿನಾಥನ್ ಅವರೊಂದಿಗಿನ ನನ್ನ ಸಂಭಾಷಣೆಗಳನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ಭಾರತ ಪ್ರಗತಿ ಕಾಣುವ ಅವರ ಉತ್ಸಾಹ ಅನುಕರಣೀಯವಾಗಿತ್ತು. ಅವರ ಜೀವನ ಮತ್ತು ಕೆಲಸ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಸ್ವಾಮಿನಾಥನ್‌ ಅಗಲಿಕೆ ದೇಶ, ಕುಟುಂಬ ಮತ್ತು ಅಭಿಮಾನಿಗಳಿಗೆ ತುಂಬಲಾರದ ನಷ್ಟ. ಓಂ ಶಾಂತಿʼ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!