ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದಲ್ಲಿ ಈದ್ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಸಂಭವಿಸಿದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಎರಡು ಗುಂಪುಗಳಿಂದ ನಡೆದ ಪರಸ್ಪರ ಕಲ್ಲು ತೂರಾಟದಿಂದ ಮನೆಗಳು, ವಾಹನಗಳ ಗಾಜು ಪುಡಿಪುಡಿಯಾಗಿವೆ.
ಪರಿಸ್ಥಿತಿ ಹತೋಟಿಕೆ ಬಂದಿದ್ದರೂ, ಮತ್ತೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.