ಶಿವಮೊಗ್ಗ ಉದ್ವಿಗ್ನ: ಓಲೈಕೆ ರಾಜಕಾರಣವೇ ಗಲಾಟೆಗೆ ಕಾರಣ ಎಂದ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆ ಪ್ರಕರಣದ ಹಿಂದೆ ಓಲೈಕೆ ರಾಜಕಾರಣವಿದೆ, ಸರ್ಕಾರ ಲಾಠಿ ಚಾರ್ಜ್ ನಡೆಸುವ ಪರಿಸ್ಥಿತಿಗೆ ಬರಬಾರದಿತ್ತು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ, ಶಿವಮೊಗ್ಗ ಹಿಂದಿನಿಂದಲೂ ಸೂಕ್ಷ್ಮನಗರವಾಗಿದೆ. ಹಿಂದೆಯೂ ಸಾಕಷ್ಟು ಘಟನೆಗಳು ನಡೆದಿವೆ. ಧಾರ್ಮಿಕ ಕಾರ್ಯಕ್ರಮಗಳೆಂದಮೇಲೆ ಇನ್ನಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!