ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದಲ್ಲಿ ನಡೆದ ಅಪರಾಧಗಳ ಘಟನೆಗಳ ಬಗ್ಗೆ ತಮ್ಮ ನೋವು ವ್ಯಕ್ತಪಡಿಸಿದ ಪ್ರಧಾನಿ ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ “ರಾಜ್ಯವನ್ನು ನಾಶಪಡಿಸಿದೆ” ಎಂದರು. ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪ್ರಧಾನಿ ಮೋದಿ ರಾಜಸ್ಥಾನದಲ್ಲಿ ರಣಕಹಳೆ ಊದಿದರು.
ಇಂದು ರಾಜಸ್ಥಾನದ ಚಿತ್ತೋರ್ಘಡದಲ್ಲಿ 7,000 ಕೋಟಿ ರೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮೋದಿ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು. ಈ ಸಂದರ್ಭದಲ್ಲಿ ಭಾವೋದ್ವೇಗಕ್ಕೆ ಒಳಗಾಗಿ, “ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಗರಿಷ್ಠ ಸಂಖ್ಯೆ ದಾಖಲಾಗಿರುವುದು ರಾಜಸ್ಥಾನದಲ್ಲಿ” ಎಂದರು.
ಅಪರಾಧಗಳ ಪಟ್ಟಿಯಲ್ಲಿ, ಅಪರಾಧದ ಘಟನೆಗಳಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ ಎಂದು ಹೇಳಲು ನನಗೆ ನೋವುಂಟುಮಾಡುತ್ತದ ಇದಕ್ಕಾಗಿಯೇ ನೀವು ಕಾಂಗ್ರೆಸ್ಗೆ ಮತ ಹಾಕಿದ್ದೀರಾ? ಎಂದು ಪ್ರಶ್ನಿಸಿದರು. ರಾಜಸ್ಥಾನದಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ತರಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮಾತ್ರ ಸಾಧ್ಯ. ರಾಜಸ್ಥಾನದ ಅಭಿವೃದ್ಧಿಯು ಕೇಂದ್ರ ಸರ್ಕಾರದ ದೊಡ್ಡ ಆದ್ಯತೆ ಎಂಬ ಮಾತನ್ನು ಹೇಳಿದರು.
ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ಬಿಜೆಪಿಯ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದರು.