SHOCKING VIDEO| ಪ್ರಾಣ ತೆಗೆದ ರೀಲ್ಸ್‌ ಹುಚ್ಚು, ರೈಲಿಗೆ ಸಿಲುಕಿ ಯುವಕನ ದೇಹ ಛಿದ್ರ ಛಿದ್ರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೆಲ್ಫಿ ಮತ್ತು ಇನ್‌ಸ್ಟಾಗ್ರಾಮ್ ರೀಲ್‌ಗಳ ಹುಚ್ಚು ಪ್ರಾಣವನ್ನೇ ಬಲಿ ಪಡೆಯುತ್ತಿದೆ. ವಿಶೇಷ ವೀಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಹೆಸರು ಮಾಡಲು ಚಿತ್ರ-ವಿಚಿತ್ರ ಸಾಹಸಗಳನ್ನು ಮಾಡ್ತಿದಾರೆ ಈಗಿನ ಯುವಕರು.  ಈ ಕ್ರಮದಲ್ಲಿ ರೈಲಿಗೆ ಸಿಲುಕಿ ಯುವಕ ತನ್ನ ಜೀವವನ್ನೇ ಬಿಟ್ಟಿದ್ದಾನೆ.

ಉತ್ತರ ಪ್ರದೇಶದ ಬಾರಾಬಂಕಿಯ ಯುವಕನೊಬ್ಬ ಇನ್‌ಸ್ಟಾ ರೀಲ್ಸ್‌ಗಾಗಿ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾನೆ. ರೈಲು ಹಳಿ ಮೇಲೆ ನಡೆಯುತ್ತಿದ್ದು, ಅದೇ ಸಮಯಕ್ಕೆ ರೈಲು ಬಂದು ಯುವಕನಿಗೆ ಡಿಕ್ಕಿ ಹೊಡೆದಿದೆ. ಫರ್ಮಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜಹಾನ್ ಗಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!