ವಾರಣಾಸಿಯಲ್ಲಿ ಭೀಕರ ಅಪಘಾತ: ಟ್ರಕ್‌ಗೆ ಕಾರ್ ಡಿಕ್ಕಿಯಾಗಿ ಎಂಟು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬುಧವಾರ ಮುಂಜಾನೆ ಜವರಾಯನ ಅಟ್ಟಹಾಸಕ್ಕೆ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ವಾರಣಾಸಿಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸೇರಿ 8 ಮಂದಿ ಸಾವನ್ನಪ್ಪಿದ್ದು, 3 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ.

ವಾರಣಾಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್‌ನಿಂದ ಪಿಲಿಭಿತ್ ಕಡೆಗೆ ತೆರಳುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಗಾಯಗೊಂಡಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡಿರುವ ಮಗುವಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!