Wednesday, December 24, 2025

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭೇಟಿಯಾದ ಉನ್ನಾವೋ ಕೇಸ್ ಸಂತ್ರಸ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಜರ್ಮನಿಯಿಂದ ವಾಪಸ್‌ ಆದ ರಾಹುಲ್‌ ಗಾಂಧಿ ಅವರನ್ನು ಅತ್ಯಾಚಾರ ಸಂತ್ರಸ್ತೆ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇದೇ ರೀತಿ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಬೇಕೆಂಬ ಆಕಾಂಕ್ಷೆಯನ್ನು ಸಂತ್ರಸ್ತೆ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ವಿರೋಧಿಸಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಪ್ರತಿಭಟನೆ ನಡೆಸುತ್ತಿದ್ದಾರೆ.

error: Content is protected !!