Wednesday, December 24, 2025

ಮಂಗನ ಕಾಯಿಲೆ ಭೀತಿ | ಶಿರಸಿಯಲ್ಲೂ ಲ್ಯಾಬ್​​ ಆರಂಭಕ್ಕೆ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಗನ ಕಾಯಿಲೆ ಭೀತಿ ಹಿನ್ನೆಲೆ ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೊಂದು ಕೆಎಫ್‌ಡಿ ಪರೀಕ್ಷಾ ಲ್ಯಾಬ್ ತೆರೆಯಲು ನಿರ್ಧರಿಸಲಾಗಿದೆ.

ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕಾರ್ಯಾಚರಣೆ ಚಾಲ್ತಿಯಲ್ಲಿರುವ ನಡುವೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮತ್ತೊಂದು ಪರೀಕ್ಷಾ ಕೇಂದ್ರ ತೆರೆಯಲು ತಯಾರಿ ನಡೆದಿದೆ. ಮಂಗನ ಕಾಯಿಲೆಯನ್ನು ಗುರುತಿಸಲು ಹಾಗೂ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ಆರೋಗ್ಯ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಪ್ರತಿವರ್ಷವೂ ಅಕ್ಟೋಬರ್​​ನಿಂದ ಜೂನ್​ವರೆಗೆ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಾಗಿ ಮಂಗನ ಕಾಯಿಲೆ ಪ್ರಕರಣಗಳು ಕಂಡು ಬರುತ್ತವೆ. ಈ ಹಿನ್ನಲೆ ಈಗಾಗಲೇ ಆರೋಗ್ಯ ಇಲಾಖೆಯಿಂದ ಹಲವು ಟೆಸ್ಟ್​ಗಳನ್ನು ನಡೆಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 1,163, ಚಿಕ್ಕಮಗಳೂರು 124, ಉಡುಪಿಯಲ್ಲಿ 12 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 368 ಜನರಿಗೆ ಪರೀಕ್ಷೆ ನಡೆದಿದೆ. ಈ ಪೈಕಿ 13 ಜನರಲ್ಲಿ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದೆ.

error: Content is protected !!