ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾಮಾರಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ನವವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ಮೃತರನ್ನು ರಿಪ್ಪನ್ ಪೇಟೆಯ ಮಧುರ (31) ಎಂದು ಗುರುತಿಸಲಾಗಿದೆ. ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಮಧುರ, ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು.
ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆಮಾರ್ಗಮಧ್ಯೆ ಮೃತಪಟ್ಟಿದ್ದಾರೆ.