ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
WEATHER| ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಶೀತಗಾಳಿ

