March 18, 2026
Wednesday, March 18, 2026
spot_img

ಬಸ್‌ನಿಂದ ಹಾರಿ ಪ್ರಾಣ ಉಳಿಸಿಕೊಂಡು ಎಸ್ಕೇಪ್‌ ಆದ ಬಸ್‌ ಚಾಲಕ, ನಿರ್ವಾಹಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಸಜೀವ ದಹನವಾಗಿದ್ದಾರೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಬಸ್‌ನ ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಾರಿ ಚಾಲಕ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಸ್‌ನಲ್ಲಿ 14 ಮಹಿಳೆಯರು ಹಾಗೂ 15 ಪುರುಷರು ಇದ್ದರು. ಗಾಯಗೊಂಡ 21 ಮಂದಿಯನ್ನು ಹಿರಿಯೂರು ಮತ್ತು ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಕುರಿತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !